ನಮ್ಮ ಬಗ್ಗೆ…
ಈ ನಾಡಿನಲ್ಲಿ ಹೆಸರಾಗಿರುವ ಹಾಯ್ ಬೆಂಗಳೂರ್, ಅಗ್ನಿ, ಲಂಕೇಶ್ ಪತ್ರಿಕೆ, ಹಿಮಾಗ್ನಿ ಮಂತಾದ ಅನೇಕ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿ, ತಮ್ಮದೇ ಆದ ಛಾಪು ಮೂಡಿಸಿರುವವರು ಪತ್ರಕರ್ತ ಸಂತೋಷ್ ಬಾಗಿಲಗದ್ದೆ. ರಾಜಕೀಯ, ಅಪರಾಧ, ಸಿನಿಮಾ ಸೇರಿದಂತೆ ತನಿಖಾ ಪತ್ರಿಕೋದ್ಯಮದಲ್ಲಿ ದಶಕಗಳಿಗೂ ಹೆಚ್ಚು ಕಾಲ ಪಳಗಿಕೊಂಡು, ಅನೇಕ ಭ್ರಷ್ಟರನ್ನು ಬಯಲಾಗಿಸಿರುವ ಬಾಗಿಲಗದ್ದೆ ಆರಂಭಿಸಿರುವ ವಿಭಿನ್ನ ಡಿಜಿಟಲ್ ಹೆಜ್ಜೆ ಶೋಧ ಮತ್ತು ಸಿನಿ ಶೋಧ. ಇದು ಹೊಸಾ ಆಯಾಮದ ಪತ್ರಿಕೋದ್ಯಮ. ಸತ್ಯದ ಭೂಮಿಕೆಯ ನೇರ-ನಿಷ್ಠುರ ವರದಿಗಳ ಸಂಕಲ್ಪದೊಂದಿಗೆ, ಭಿನ್ನ ಶೈಲಿಯ ಬರವಣಿಗೆಯ ಮೂಲಕ ಹೊಸತೊಂದು ಜಗತ್ತು ನಿಮ್ಮೆದುರು ನಿರಂತವಾಗಿ ತೆರೆದುಕೊಳ್ಳಲಿದೆ; ಅಚ್ಚರಿಗೀಡುಮಾಡಲಿದೆ! ಅಂದಹಾಗೆ, ಇಲ್ಲಿ ಪ್ರಕಟವಾಗೋ ಯಾವುದೇ ಬರಹಗಳನ್ನು ಯಾರೂ ಭಟ್ಟಿ ಇಳಿಸುವಂತಿಲ್ಲ. ಅಂಥಾ ಕಳವು ವೃತ್ತಾಂತ ಗಮನಕ್ಕೆ ಬಂದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು.
All rights reserved @ dreamwings media
Mail id: dreamwingsmedia@gmail.com